ಉಡುಪಿ: ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ,
ಇದು ರಾಜಕಾರಣ ದೃಷ್ಟಿಯಲ್ಲಿಟ್ಟುಕೊಂಡು ನಡೆಯುವ ಪಾದಯಾತ್ರೆ.ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಇವರು ಏನು ಮಾಡಿದ್ದಾರೆ? ಈ ವಿಚಾರದಲ್ಲಿ ನ್ಯಾಯಾಲಯದಲ್ಲಿ ವ್ಯಾಜ್ಯ ಇದೆ.ಇದೆಲ್ಲವೂ ಜನತಗೆ ಗೊತ್ತಿದೆ.ಮೇಕೆದಾಟು ಯೋಜನೆಗೆ ನಮ್ಮ ಸರ್ಕಾರ ಪ್ರಾಧಾನ್ಯತೆ ಕೊಟ್ಟಿರುವುದಾಗಿ ಸಿಎಂ ಹೇಳಿದ್ದಾರೆ.ನ್ಯಾಯಾಲಯದಲ್ಲಿರುವ ದಾವೆ ಬಗೆಹರಿಸಿ ಯೋಜನೆ ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಚಿವರು,ಇಷ್ಟಾದ ಮೇಲೂ ಹೋರಾಟ ಮಾಡುವುದು ಸಮಂಜಸವಲ್ಲ.
ಕೊರೋನಾ ಕಾಲದ ಕಾಲ್ನಡಿಗೆ ನಿಮಗೆ ಶೋಭೆ ತರುವುದಿಲ್ಲ ಎಂದು ಉಡುಪಿಯಲ್ಲಿ ಸಮಾಜ ಕಲ್ಯಾಣ ಹಿಂದುಳಿದ ವರ್ಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.
PublicNext
08/01/2022 01:17 pm