ಬೆಂಗಳೂರು: ಹೆಮ್ಮಾರಿ ಸೋಂಕು ಕೊರೊನಾ,ಒಮಿಕ್ರಾನ್ ನಂತಹ ರೂಪಾಂತರ ವೈರಸ್ ಗಳಿಂದ ಜನ ಜೀವನ ಲಯ ತಪ್ಪುತ್ತಿದೆ. ಸದ್ಯ ವೀಕೆಂಡ್ ಕರ್ಫ್ಯೂ ಸೇರಿದಂತೆ ವಿವಿಧ ಕಠಿಣ ಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸರ್ಕಾರ ಸೋಂಕು ಹರಡುವಿಕೆಯನ್ನು ಕಂಟ್ರೋಲ್ ಮಾಡಲು ಪ್ರಯತ್ನಿಸುತ್ತಿದೆ.
ಇದರ ಮಧ್ಯೆ ರಾಜ್ಯದಲ್ಲಿ ಫೆಬ್ರವರಿ ಮಧ್ಯಂತರ ಅವಧಿಗೆ ಕೊರೊನಾ 3ನೇ ಅಲೆ ಉತ್ತುಂಗಕ್ಕೇರುವ ಸಾಧ್ಯತೆಗಳಿವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಮಾಧ್ಯಮವೊಂದರ ಸಂದರ್ಶನದಲ್ಲಿ ರಾಜ್ಯದ ಕೊರೊನಾ ಪರಿಸ್ಥಿತಿ ಹಾಗೂ ಸೋಂಕು ನಿಯಂತ್ರಿಸಲು ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಸಚಿವ ಸುಧಾಕರ್ ಅವರು ವಿವರಿಸಿದ್ದಾರೆ.
ರಾಜ್ಯದಲ್ಲಿ ಸೋಂಕು ಹಠಾತ್ ಉಲ್ಬಣಗೊಳ್ಳಲು ಮುಖ್ಯ ಕಾರಣಗಳೇನು?
ರಾಜ್ಯದಲ್ಲಿ 38,507 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 32,157 ಪ್ರಕರಣಗಳು ಬೆಂಗಳೂರು ನಗರ ಜಿಲ್ಲೆಯಲ್ಲಿಯೇ ಇವೆ. ಸುಮಾರು ಶೇ.83.5 ರಷ್ಟು ಸಕ್ರಿಯ ಪ್ರಕರಣಗಳು ಬೆಂಗಳೂರಿನಲ್ಲಿವೆ. ಹೆಚ್ಚಿನ ಕೇಸ್ ಲೋಡ್ ಹೊಂದಿರುವ ಹೆಚ್ಚಿನ ಅಪಾಯದ ದೇಶಗಳು ಮತ್ತು ನೆರೆಯ ರಾಜ್ಯಗಳಿಂದ ಬರುವ ಪ್ರಯಾಣಿಕರು ಕರ್ನಾಟಕದಲ್ಲಿ ಸೋಂಕು ಉಲ್ಬಣಗೊಳ್ಳಲು ಪ್ರಮುಖ ಕಾರಣವಾಗಿದೆ.
ಸೋಂಕಿತರ ಪರಿಶೀಲಿಸಲು, ವಿಮಾನ ನಿಲ್ದಾಣಗಳಂತೆಯೇ ರೈಲು ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳ ಕೇಂದ್ರಗಳಲ್ಲಿ ಅಂತರ-ರಾಜ್ಯ ಪ್ರಯಾಣಿಕರ ತಪಾಸಣೆಯನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಲಾಗಿದೆ.
ಬೋರ್ಡಿಂಗ್ ಪಾಯಿಂಟ್ ಗಳಲ್ಲಿ ಪ್ರಯಾಣಿಕರನ್ನು ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡುವಂತೆ ರೈಲ್ವೆ ಸಚಿವಾಲಯಕ್ಕೆ ಮನವಿ ಮಾಡಿಕೊಳ್ಳಲಾಗಿದೆ.
PublicNext
09/01/2022 12:50 pm