ಬೆಂಗಳೂರು : ಕೋವಿಡ್ ನಿಂದ ಬಳಲುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ಇಂದು ರಾಜ್ಯದಲ್ಲಿ ಕೊರೊನಾ ಸೋಂಕಿನ 3ನೇ ಅಲೆ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಯುತ್ತಿದ್ದಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂಗೆ ಕರೆ ಮಾಡಿದ್ದಾರೆ.
ಸುಮಾರು ಐದು ನಿಮಿಷ ಮಾತನಾಡಿದ ಮೋದಿ, ತಮ್ಮ ಆರೋಗ್ಯ ಕಾಪಾಡಿಕೊಳ್ಳಿ. ಸೂಕ್ತ ಚಿಕಿತ್ಸೆ ಪಡೆಯಿರಿ ಎಂಬ ಸಲಹೆ ನೀಡಿದ್ದಾರೆ. ತನ್ನ ಜತೆಗೆ ಕುಟುಂಬದ ಇಬ್ಬರು ಸದಸ್ಯರಿಗೂ ಸೋಂಕು ತಗುಲಿದೆ ಎಂದು ಬೊಮ್ಮಾಯಿ ಹೇಳಿದಾಗ, ಎಲ್ಲರೂ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಿ ಎಂದು ನರೇಂದ್ರ ಮೋದಿ ಹೇಳಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆಯೂ ಪ್ರಧಾನಿಗೆ ಸಿಎಂ ಮಾಹಿತಿ ನೀಡಿದ್ದಾರೆ.
PublicNext
11/01/2022 07:14 pm