ಬೆಂಗಳೂರು: ಸರ್ಕಾರಿ ಅಥವಾ ಖಾಸಗಿ ಪ್ರಯೋಗಾಲಯಗಳಲ್ಲಿ ಸಂಪೂರ್ಣ ಉಚಿತವಾಗಿ ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಲು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.
ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಎಪಿ ಪಕ್ಷದ ಬೆಂಗಳೂರು ವೈದ್ಯರ ಘಟಕದ ಅಧ್ಯಕ್ಷ ಬಿ.ಎಲ್.ವಿಶ್ವನಾಥ್, ಶೇ. 75ಕ್ಕೂ ಹೆಚ್ಚು ಬೆಂಗಳೂರಿಗರು ಖಾಸಗಿ ಆಸ್ಪತ್ರೆಗಳು ಅಥವಾ ಲ್ಯಾಬೊರೇಟರಿಗಳ ಮೇಲೆ ಅವಲಂಬಿತರಾಗಿದ್ದು, ಸಮೀಪದಲ್ಲಿ ಸರ್ಕಾರಿ ಆಸ್ಪತ್ರೆಯಿಲ್ಲದ ಕಾರಣಕ್ಕೆ ಬಡವರು ಹಾಗೂ ಮಧ್ಯಮ ವರ್ಗದವರೂ ಖಾಸಗಿ ಮೊರೆ ಹೋಗಬೇಕಾಗಿದೆ. ಖಾಸಗಿ ಲ್ಯಾಬೊರೇಟರಿಗಳು 500 ರೂ. ಪರೀಕ್ಷಾ ಶುಲ್ಕ ಹಾಗೂ 300 ರೂ.ವರೆಗೆ ಇತರೆ ಶುಲ್ಕ ಸೇರಿ 800 ರೂಪಾಯಿವರೆಗೆ ವಸೂಲಿ ಮಾಡುತ್ತಿವೆ. ಹೀಗಾಗಿ ಎಲ್ಲೆಡೆಯು ಉಚಿತ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಸರ್ಕಾರವು ವ್ಯವಸ್ಥೆ ಕಲ್ಪಿಸಿ ಜನರಿಗೆ ನೆರವಾಗಬೇಕು ಎಂದು ಆಗ್ರಹಿಸಿದ್ದಾರೆ.
PublicNext
13/01/2022 03:26 pm