ರಾಮನಗರ: ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಎರಡು ದಿನದ ಹಿಂದೆ ರಾಮನಗರ ಕ್ಷೇತ್ರಕ್ಕೆ ಆಗಮಿಸಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಆ ಬಳಿಕ ಬೆಂಗಳೂರಿಗೆ ವಾಪಸ್ ಆದ ಬೆನ್ನಲ್ಲೇ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಾತ್ರಿಯಾಗಿದೆ. ಸದ್ಯ ಬೆಂಗಳೂರಿನ ನಿವಾಸದಲ್ಲೇ ಚಿಕಿತ್ಸೆ ಪಡೆಯುತ್ತಿರುವ ಅವರು ಹೋಂ ಐಸೋಲೇಷನ್‌ನಲ್ಲಿ ಇದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
PublicNext
15/01/2022 05:38 pm