ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮತ್ತೆ ಕೋವಿಡ್ ರೂಲ್ಸ್ ಬ್ರೇಕ್: ವೀಕೆಂಡ್ ಕರ್ಫ್ಯೂ ಮರೆತ ರೇಣುಕಾಚಾರ್ಯ

ದಾವಣಗೆರೆ: ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತೆ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ್ದಾರೆ. ಅವರು ಇಂದು ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಅಂಗನವಾಡಿ ಕಟ್ಟಡ ಉದ್ಘಾಟನೆ ನೆರವೇರಿಸಿದ್ದಾರೆ.

ವೀಕೆಂಡ್ ಕರ್ಫ್ಯೂ ನಡುವೆಯೂ ರೇಣುಕಾಚಾರ್ಯ ಅನೇಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬಳ್ಳೇಶ್ವರ ಗ್ರಾಮದಲ್ಲಿ 8 ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡ ಉದ್ಘಾಟಿಸಿದ್ದಾರೆ. ಮಾದೇನಹಳ್ಳಿ ಗ್ರಾಮದಲ್ಲಿ 11.60 ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡಕ್ಕೆ ಭೂಮಿ ಪೂಜೆ, 30 ಲಕ್ಷ ರೂ. ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿ ಉದ್ಘಾಟಿಸಿ, ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕರಿಗೆ ಸುರಕ್ಷಾ ಕಿಟ್ ವಿತರಿಸಿದ್ದಾರೆ.

ಸೋಮನಮಲ್ಲಾಪುರ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿ, 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ಮುದುವರೆದ ಕಾಮಗಾರಿ ಉದ್ಘಾಟನೆ, 5.90 ಲಕ್ಷ ರೂ. ವೆಚ್ಚದ ಹೈಟೆಕ್ ಶೌಚಾಲಯ ಹಾಗೂ 20 ಲಕ್ಷ ರೂ. ವೆಚ್ಚದ ರಿವೀಟ್ ಮೆಂಟ್ ಕಾಮಗಾರಿ ಉದ್ಘಾಟಿಸಿದ್ದಾರೆ.

Edited By : Vijay Kumar
PublicNext

PublicNext

16/01/2022 03:49 pm

Cinque Terre

47.04 K

Cinque Terre

8