ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಆದೇಶ ವಾಪಸ್: ಅಧಿಕೃತ ಘೋಷಣೆಯೊಂದೇ ಬಾಕಿ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಜಾರಿಗೊಳಿಸಲಾಗಿದ್ದ ವಾರಾಂತ್ಯದ ಕರ್ಫ್ಯೂವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.

ಇಂದು ಸಿಎಂ ನೇತೃತ್ವದಲ್ಲಿ ನಡೆದ ಅಧಿಕಾರಿಗಳು ಹಾಗೂ ತಜ್ಞರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಾರಾಂತ್ಯ ಕರ್ಫ್ಯೂ ಬದಲಾಗಿ ನಿಯಮಗಳನ್ನು ಬಿಗಿಗೊಳಿಸಬೇಕು. ಆಸ್ಪತ್ರೆಗಳಲ್ಲಿ ಹೆಚ್ಚಿನ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ‌.

ಸೋಂಕು ಇದ್ದರೂ ಸಾವಿನ ಪ್ರಮಾಣ ಕಡಿಮೆ ಇರುವ ಹಿನ್ನೆಲೆಯಲ್ಲಿ ವಾರಂತ್ಯ ಕರ್ಫ್ಯೂ ವಾಪಸ್ ಪಡೆಯಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

Edited By :
PublicNext

PublicNext

21/01/2022 03:04 pm

Cinque Terre

88.15 K

Cinque Terre

22

ಸಂಬಂಧಿತ ಸುದ್ದಿ