ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡಗೆ ಕೊರೊನಾ ಸೋಂಕು ತಗುಲಿದೆ. ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಶುಕ್ರವಾರ ರಾತ್ರಿ ದೇವೇಗೌಡರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿತ್ತು.
ಇದೇ ವೇಳೆ ಸೊಸೆ ಅನಿತಾ ಕುಮಾರಸ್ವಾಮಿ ಅವರಿಗೂ ಸೋಂಕು ತಗುಲಿದೆ. ದೇವೇಗೌಡರ ಆರೋಗ್ಯದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸದ್ಯ ದೇವೇಗೌಡರು ಆರೋಗ್ಯವಾಗಿದ್ದು ಸೌಮ್ಯರೂಪದ ಸೋಂಕು ಅವರಿಗೆ ತಗುಲಿರಬಹುದು. ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದವರೆದಿದೆ ಎಂದಿದ್ದಾರೆ.
PublicNext
22/01/2022 12:12 pm