ಬಾಗಲಕೋಟೆ: ಕಾಂಗ್ರೆಸ್ ಪಾದಯಾತ್ರೆಯಿಂದ ಕೋವಿಡ್ ಹರಡಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಎಸ್.ಟಿ.ಸೋಮಶೇಖರ್ ಅವರಿಗೆ ನಮ್ಮ ಪಾದಯಾತ್ರೆಯಿಂದ ಕೋವಿಡ್ ಬಂದಿದೆಯಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯ ಬಿಜೆಪಿ ಸರ್ಕಾರವು ಕಾಂಗ್ರೆಸ್ ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆ ಹತ್ತಿಕ್ಕಲು ವೀಕೆಂಡ್ ಕರ್ಪ್ಯೂ ಜಾರಿ ಮಾಡಿತು. ಕಾಂಗ್ರೆಸ್ ಪಾದಯಾತ್ರೆಯಿಂದ ಕೋವಿಡ್ ಹರಡಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಎಸ್.ಟಿ.ಸೋಮಶೇಖರ್ ಅವರಿಗೆ ನಮ್ಮ ಪಾದಯಾತ್ರೆಯಿಂದ ಕೊವಿಡ್ ಬಂತಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ರಾಜ್ಯದ ಜನ ಈಗಾಗಲೇ ಕೊರೊನಾದಿಂದ ತತ್ತರಿಸಿದ್ದಾರೆ. ವೀಕೆಂಡ್ ಕರ್ಪ್ಯೂ ಅವಶ್ಯಕತೆ ಇರಲಿಲ್ಲ. ಆದರೂ ಸರ್ಕಾರ ಜಾರಿಗೆ ಜಾರಿ ಮಾಡಿತು. ಪಾದಯಾತ್ರೆ ಹತ್ತಿಕ್ಕುವ ಉದ್ದೇಶ ಬಿಟ್ಟರೆ ಸರ್ಕಾರದ ನಿರ್ಧಾರದ ಹಿಂದೆ ಬೇರೇನೂ ಇರಲಿಲ್ಲ ಎಂದು ಕಿಡಿಕಾರಿದರು.
PublicNext
24/01/2022 10:46 pm