ಬೆಂಗಳೂರು: ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಇಂದು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೂ ಕೆಲ ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ ನಗರದ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಚಿಕಿತ್ಸೆ ಪಡೆದ ಬಳಿಕ, ಇಂದು ಅವರ ವರದಿ ಕೊರೋನಾ ನೆಗೆಟಿವ್ ಎಂಬುದಾಗಿ ದೃಢಪಟ್ಟ ಕಾರಣ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಪದ್ಮನಾಭನಗರದಲ್ಲಿನ ಮನೆಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ.
PublicNext
26/01/2022 08:46 pm