ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಮಾಸ್ಕ್ ಕಡ್ಡಾಯವಲ್ಲ : ಡಾ.ಕೆ. ಸುಧಾಕರ್ ಸ್ಪಷ್ಟನೆ

ಮೈಸೂರು : ಹೆಮ್ಮಾರಿ ಸೋಂಕು ಕೊರೊನಾ ಮತ್ತೆ ಹೆಚ್ಚುತ್ತಲಿದೆ. ಇದರ ಮಧ್ಯೆ ಮಾಸ್ಕ್ ಬೇಕು ಬೇಡಗಳ ಚರ್ಚಗಳು ಜೋರಾಗಿದೆ. ಇದರ ಮಧ್ಯೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಿ ದಂಡ ವಿಧಿಸುವ ಪರಿಸ್ಥಿತಿ ಇನ್ನೂ ಬಂದಿಲ್ಲ , ಜನ ನಿರ್ಲಕ್ಷ್ಯ ಮಾಡದೇ ಸಮಯಕ್ಕೆ ಸರಿಯಾಗಿ ಎರಡನೇ ಹಾಗೂ ಮೂರನೇ ಡೋಸ್(ಬೂಸ್ಟರ್) ಲಸಿಕೆ ಹಾಕಿಸಿಕೊಳ್ಳಿ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚು ಕಂಡು ಬರುತ್ತಿರುವುದರಿಂದ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ನಿರ್ದೇಶನಗಳನ್ನು ಬಿಡುಗಡೆ ಮಾಡಲಾಗಿದೆ. ಆದರೆ, ಮಾಸ್ಕ್ ಕಡ್ಡಾಯ ನಿಯಮ ಉಲ್ಲಂಘಿಸಿದವರಿಗೆ ದಂಡ ಹಾಕುವ ಪರಿಸ್ಥಿತಿ ಇನ್ನೂ ಬಂದಿಲ್ಲ ಎಂದರು.

ಕೋವಿಡ್ ಬೇರೆ ದೇಶದಲ್ಲಿ ಇದೆ, ನಮ್ಮಲ್ಲಿ ಇಲ್ಲ ಎಂದು ನಿರ್ಲಕ್ಷ್ಯ ಮಾಡಬೇಡಿ ಎಂದು ಮನವಿ ಮಾಡಿದರು.

Edited By : Nirmala Aralikatti
PublicNext

PublicNext

23/04/2022 09:58 am

Cinque Terre

43.03 K

Cinque Terre

1

ಸಂಬಂಧಿತ ಸುದ್ದಿ