ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಅವರು, ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್‌ನಲ್ಲಿ ಇದ್ದು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
PublicNext
03/06/2022 07:24 am