ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿಕ ಇದೀಗ ಪ್ರಿಯಾಂಕಾ ಗಾಂಧಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಅವರು, ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿದ್ದರಿಂದ ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದೆ. ಕೋವಿಡ್ ಪರೀಕ್ಷೆಯಲ್ಲಿ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಕ್ವಾರಂಟೈನ್‍ಗೆ ಒಳಗಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ತಪಾಸಣೆಗೆ ಒಳಗಾಗಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
PublicNext
03/06/2022 12:32 pm