ನವದೆಹಲಿ: ಎಐಸಿಸಿ ನಾಯಕಿ ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ. ಅವರನ್ನು ನವದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಸುರ್ಜೇವಾಲಾ ತಿಳಿಸಿದ್ದಾರೆ.
PublicNext
12/06/2022 03:50 pm