ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಕೋವಿಡ್ -19 ಪಾಸಿಟಿವ್ ಪರೀಕ್ಷೆ ನಡೆಸಿದ ಎರಡು ದಿನಗಳ ನಂತರ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚೆನ್ನೈನಲ್ಲಿರುವ ಕಾವೇರಿ ಆಸ್ಪತ್ರೆಗೆ ಮುಖ್ಯಮಂತ್ರಿ ದಾಖಲಾಗಿದ್ದಾರೆ. ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇಂದು ಆರೋಗ್ಯದಲ್ಲಿ ಕೊಂಚ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇನ್ನು ಸ್ಟಾಲೀನ್ ಆರೋಗ್ಯದ ಕುರಿತು ಕಾವೇರಿ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದ ಮುಖ್ಯಮಂತ್ರಿಗಳು ಆಸ್ಪತ್ರೆಗೆ ದಾಖಲಾಗಿದ್ದು, ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ.
PublicNext
14/07/2022 03:30 pm