ಬಾಲಿವುಡ್ ನಟ ಹಾಗೂ ಬಿಜೆಪಿ ಸಂಸದ ಸನ್ನಿ ಡಿಯೋಲ್ ಅವರಿಗೂ ಕೋವಿಡ್ ಸೋಂಕು ದೃಢ ಪಟ್ಟಿದ್ದು ಈ ಕುರಿತು ಸ್ವತಃ ಅವರೇ ತಮ್ಮ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.
'ನನಗೆ ಕೋವಿಡ್-19 ಇರುವುದು ದೃಢಪಟ್ಟಿದೆ. ಹಾಗಾಗಿ ನನ್ನೊಂದಿಗೆ ನಿಕಟ ಸಂಪರ್ಕಕ್ಕೆ ಬಂದವರು ಸೋಂಕು ತಪಾಸಣೆ ಮಾಡಿಸಿಕೊಳ್ಳಿ' ಎಂದು ಸನ್ನಿ ಡಿಯೋಲ್ ಅವರು ಟ್ವಿಟರ್ ಮೂಲಕ ತಿಳಿಸಿದ್ದಾರೆ.
'ಕೋವಿಡ್ ದೃಢಪಟ್ಟ ಬಳಿಕ ನಾನು ಪ್ರತ್ಯೇಕವಾಗಿ ವಾಸವಾಗಿದ್ದೇನೆ. ನನ್ನ ನಿಕಟ ಸಂಪಕರ್ಕಕ್ಕೆ ಬಂದವರು ಕೂಡ ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಳ್ಳಿ ಎಂದು ನಾನು ಕೇಳಿಕೊಳ್ಳುತ್ತೇನೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.
PublicNext
02/12/2020 01:31 pm