ಬೆಂಗಳೂರು: ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಕಡಿಮೆಯಾದ ಹಿನ್ನೆಲೆ ಚಿತ್ರಮಂದಿರಗಳಲ್ಲಿ ವಿಧಿಸಲಾದ ನಿರ್ಬಂಧಗಳನ್ನು ತೆರವುಗೊಳಿಸಲು ಚಿಂತನೆ ನಡೆದಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ
ಚಿತ್ರರಂಗದ ಪ್ರಮುಖರು ಮಂಗಳವಾರ ವಿಧಾನಸೌಧದಲ್ಲಿ ಸಚಿವರನ್ನು ಭೇಟಿಮಾಡಿ, ಚಿತ್ರಮಂದಿರಗಳ ಮೇಲಿನ ನಿರ್ಬಂಧ ತೆರವುಗೊಳಿಸುವಂತೆ ಒತ್ತಾಯಿಸಿದರು. ಶೇ 50ರಷ್ಟು ಆಸನಗಳ ಬದಲಿಗೆ ಎಲ್ಲ ಆಸನಗಳನ್ನೂ ಭರ್ತಿ ಮಾಡಲು ಅವಕಾಶ ನೀಡುವಂತೆ ಆಗ್ರಹಿಸಿದರು. ‘ಕೋವಿಡ್‌ನಿಂದಾಗಿ ಚಿತ್ರೋದ್ಯಮ ಹೆಚ್ಚು ನಷ್ಟ ಅನುಭವಿಸಿದೆ. ಚಿತ್ರರಂಗಕ್ಕೆ ಪೂರ್ಣ ಬೆಂಬಲ ನೀಡಲು ಸರ್ಕಾರ ಸಿದ್ಧವಾಗಿದೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮೂರು ದಿನಗಳ ಒಳಗಾಗಿ ಸಭೆ ಸೇರಲಿದೆ. ಸಮಿತಿಯ ಸಲಹೆ ಆಧರಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಸಚಿವರು ಹೇಳಿದರು.
PublicNext
22/09/2021 04:40 pm