ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೆಗೌಡ ಅವರು ಇಂದು ಶಿರಾ ಕ್ಷೇತ್ರದ ಅಭ್ಯರ್ಥಿಯಾಗಿ ದಿವಂಗತ ಸತ್ಯಾನಾರಾಯಣ್ ಅಮ್ಮಾಜಮ್ಮ ಅವರನ್ನು ಘೋಷಣೆ ಮಾಡಿದ್ದರು. ಈ ಬೆನ್ನಲ್ಲೇ ಅಮ್ಮಾಜಮ್ಮ ಅವರಿಗೆ ಕೊರೊನಾ ತಗುಲಿರುವ ವೈದ್ಯಕೀಯ ವರದಿ ಹೊರಬಿದ್ದಿದೆ.
ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ದಿವಂಗತ ಸತ್ಯಾನಾರಾಯಣ್ ಪುತ್ರ ಸತ್ಯಪ್ರಕಾಶ್, 'ಕಳೆದ ಮೂರು ದಿನದಿಂದ ಅಮ್ಮಾಜಮ್ಮ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ಅವರ ವರದಿ ಬಂದಿದ್ದು, ಕೊರೊನಾ ತಗುಲಿರುವುದು ಧೃಡಪಟ್ಟಿದೆ. ಹೀಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ' ಎಂದು ತಿಳಿಸಿದ್ದಾರೆ.
PublicNext
06/10/2020 06:25 pm