ಲಕ್ನೋ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಪಂಜಾಬ್ ಸಚಿವ ಬಲ್ಬೀರ್ ಸಿಧು ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಪಂಜಾಬ್ ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಸಿಧು ಅವರಿಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಅವರಿಗೆ ಸೋಂಕು ತಗುಲಿರುವುದು ಇಂದು ಖಚಿತವಾಗಿದೆ. ಸಚಿವರು ಸಂಗ್ರೂರ್ ನಲ್ಲಿ ಸೋಮವಾರ ನಡೆದ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ರಾಹುಲ್ ಗಾಂಧಿ, ಸಿಎಂ ಅಮರಿಂದರ್ ಸಿಂಗ್ ಮತ್ತು ಪಿಪಿಸಿಸಿ ರಾಜ್ಯ ಅಧ್ಯಕ್ಷ ಸುನಿಲ್ ಜಖರ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, "ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದ ಕೃಷಿ ಕಾನೂನುಗಳ ಮುಂದೆ ನಮಗೆ ಮಾಸ್ಕ್‌ಗಳು ಅಷ್ಟೇನೂ ಮುಖ್ಯವಲ್ಲ" ಎಂದು ಹೇಳಿದ್ದರು.
PublicNext
06/10/2020 05:27 pm