ಬೆಂಗಳೂರು: ಗೃಹ ಸಚಿವ ಬಸವರಾಜ ಬೊಮ್ಮಾಯಿ ಬೆನ್ನಲ್ಲೇ ಉನ್ನತ ಶಿಕ್ಷಣ ಸಚಿವ, ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ವಿಚಾರವನ್ನು ಸ್ವತಃ ಅಶ್ವತ್ಥನಾರಾಯಣ ಅವರೇ ಟ್ವೀಟ್ ಮೂಲಕ ಬಹಿರಂಗಪಡಿಸಿದ್ದಾರೆ. "ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಸೋಮವಾರದಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ. ಸೆಪ್ಟೆಂಬರ್ 16ರಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.
PublicNext
19/09/2020 04:10 pm