ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿಯಲ್ಲಿ ಮೂರು ಮಕ್ಕಳ ಸಾವಿನ ಕೇಸ್: ವರದಿ ಸಲ್ಲಿಸಲು ಸಿಎಂ ತಾಕೀತು

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಮೂರು ಮಕ್ಕಳ ಸಾವು ಪ್ರಕರಣದ ಕುರಿತು ತನಿಖಾ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ.

ಧಡಾರ್ ರೋಗ ತಡೆಗೆ ನೀಡಲಾಗುವ ರುಬೆಲ್ಲೋ ಚುಚ್ಚುಮದ್ದನ್ನು ಪಡೆದ ಸಂದರ್ಭದಲ್ಲಿ ಆ ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಪ್ರಕರಣದ ಕುರಿತು ಮುಖ್ಯಮಂತ್ರಿಗಳು ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಅವರಿಂದ ವಿವರವಾದ ವರದಿ ಕೇಳಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿಎಂ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

Edited By : Nagaraj Tulugeri
PublicNext

PublicNext

18/01/2022 08:24 am

Cinque Terre

60.04 K

Cinque Terre

0

ಸಂಬಂಧಿತ ಸುದ್ದಿ