ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಮಕ್ಕಳಲ್ಲಿ ಕೊರೊನಾ ಹೆಚ್ಚಾದರೆ ಶಾಲೆ ಬಂದ್

ಬೆಂಗಳೂರು: ಶಾಲಾ ಮಕ್ಕಳಲ್ಲಿ ಕೊರೊನಾ ಸೋಂಕು ಉಲ್ಬಣಿಸಿದರೆ ಆ ಶಾಲೆಗಳನ್ನು ಬಂದ್ ಮಾಡಲಾಗುವುದು‌. ಬೆಂಗಳೂರು ಮಹಾನಗರ ವ್ಯಾಪ್ತಿಯ ಎಲ್ಲ ಶಾಲೆ-ಕಾಲೇಜುಗಳು ಜನವರಿ 29ರವರೆಗೆ ಬಂದ್ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ಬೆಂಗಳೂರು ನಗರ ಹೊರತುಪಡಿಸಿ ಉಳಿದೆಡೆ ಶಾಲೆಗಳು ಎಂದಿನಂತೆ ನಡೆಯುತ್ತವೆ. ಒಂದು ಶಾಲೆಯಲ್ಲಿ 20ಕ್ಕೂ ಹೆಚ್ಚು ಮಕ್ಕಳಿಗೆ ಕೊರೊನಾ ಸೋಂಕು ಕಂಡುಬಂದಲ್ಲಿ ಆ ಶಾಲೆಗಳನ್ನು ಬಂದ್ ಮಾಡಲಾಗುವುದು. ಇದರ ಎಲ್ಲ ಜವಾಬ್ದಾರಿಗಳನ್ನು ನೋಡಲ್ ಅಧಿಕಾರಿ ಹಾಗೂ ತಹಶೀಲ್ದಾರ್ ‌ಗಳಿಗೆ ವಹಿಸಲಾಗಿದೆ‌ ಎಂದು ನಾಗೇಶ್ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

21/01/2022 04:06 pm

Cinque Terre

149.21 K

Cinque Terre

14

ಸಂಬಂಧಿತ ಸುದ್ದಿ