ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 10 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತಾಡಲಿದ್ದಾರೆ. ಈ ಕುರಿತು ಪಿಎಂಒ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯ ಭಾಷಣದತ್ತ ಎಲ್ಲರ ಚಿತ್ತ ನೆಟ್ಟಿದೆ. ಗುರುವಾರ 100 ಕೋಟಿ ಲಸಿಕೆ ವಿತರಿಸಿ ಭಾರತ ಮೈಲಿಗಲ್ಲು ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆಯೇ ಭಾಷಣ ಮಾಡಬಹುದು ಎಂಬ ಸುದ್ದಿ ಹರಿದಾಡಿತ್ತು. ಆದರೆ ನಿನ್ನೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿರಲಿಲ್ಲ. ಇಂದು ಭಾಷಣ ಮಾಡಲಿರುವ ಪ್ರಧಾನಿ ಮೋದಿ ಮಕ್ಕಳಿಗೂ ಲಸಿಕೆ ನೀಡುವ ಬಗ್ಗೆ ಅಧಿಕೃತ ಘೋಷಣೆ ಮಾಡೋ ಸಾಧ್ಯತೆಗಳಿದೆ.
ನಿನ್ನೆ ಬೆಳಗ್ಗೆ 9 ಗಂಟೆ 47 ನಿಮಿಷಕ್ಕೆ 100 ಕೋಟಿ ಹನಿ ಲಸಿಕೆ ವಿತರಿಸುವ ಮೂಲಕ ಇತಿಹಾಸ ನಿರ್ಮಾಣವಾಗಿತ್ತು. ಚೀನಾದ ಬಳಿಕ 100 ಕೋಟಿ ಡೋಸ್ ನೀಡಿರುವ ವಿಶ್ವದ 2ನೇ ದೇಶವಾಗಿ ಭಾರತ ಹೊರಹೊಮ್ಮಿದೆ. ಶೇಕಡಾವಾರು ಪ್ರಮಾಣದಲ್ಲಿ ಶೇ. 23ರಷ್ಟು ಮಾತ್ರ ವ್ಯಾಕ್ಸಿನೇಷನ್ ಆಗಿದೆ.
PublicNext
22/10/2021 07:41 am