ಬೆಂಗಳೂರು: ಕೊರೊನಾ ರೂಪಾಂತರಿ ಓಮಿಕ್ರಾನ್ ವೈರಸ್ ಭೀತಿ ಕಾಣಿಸುತ್ತಿದ್ದಂತೆ ರಾಜ್ಯ ಸರ್ಕಾರ ಹೈ ಅಲರ್ಟ್ ಆಗಿದೆ. ಈ ಬಗ್ಗೆ ಇಂದು ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಮಿತಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಓಮಿಕ್ರಾನ್ ಕೊರೊನಾ ರೂಪಾಂತರ ವೈರಸ್ ಭೀತಿ ಹೆಚ್ಚಾಗಿರುವಂತೆಯೇ ರಾಜ್ಯದಲ್ಲಿ ವ್ಯಾಕ್ಸಿನೇಷನ್ ಕಡ್ಡಾಯವಲ್ಲ. ಆದರೆ ರಾಜ್ಯಕ್ಕೆ ಯಾವುದೇ ದೇಶದಿಂದ ಪ್ರಯಾಣಿಕರೂ ಬಂದರೂ ಅವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಿರುತ್ತದೆ ಎಂದ ಅವರು, ವಿದೇಶಗಳಿಂದ ರಾಜ್ಯಕ್ಕೆ ಪ್ರತಿ ದಿನ ಸುಮಾರು 2,500 ಪ್ರಯಾಣಿಕರು ಬಂದಿಳಿಯುತ್ತಿದ್ದು, ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
PublicNext
30/11/2021 10:27 pm