ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಕೊರೊನಾ ಹಾವಳಿ: ನಾಳೆ ಸಿಎಂ ನೇತೃತ್ವದಲ್ಲಿ ಸಭೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕಿನ ಹೊಸ ಪ್ರಕರಣಗಳು ಕಾಣಿಸಿಕೊಂಡಿವೆ. ಇದ್ದಕ್ಕಿದ್ದಂತೆ ಸೋಂಕಿನ ತೀವ್ರತೆ ಹೆಚ್ಚಾಗಿದೆ. ಹೀಗಾಗಿ ರಾಜ್ಯದ ಜನತೆಯಲ್ಲಿ ಆತಂಕ ಮೂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕೊರೊನಾ ಸ್ಪೋಟವಾಗಿದ್ದು, ಮತ್ತೆ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಭೀತಿ ಶುರುವಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಿಎಂ ಬೊಮ್ಮಾಯಿ ಬೆಂಗಳೂರು ಭಾಗದ ಸಚಿವರ ಜೊತೆ ಮಹತ್ವದ ಸಭೆ ನಡೆಸಲಿದ್ದು, ಬೆಂಗಳೂರಿನಲ್ಲಿ ಮತ್ತೆ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇನ್ನೂ, ಹೊಸ ವರ್ಷ ದಂದೇ ರಾಜ್ಯದ ಜನತೆಗೆ ಬಿಗ್‌ ಶಾಕಿಂಗ್‌ ಸುದ್ದಿ ಸಿಕ್ಕಿದೆ. ಹೌದು, 1033 ಮಂದಿಗೆ ಸೋಂಕು ಇರುವುದು ಪತ್ತೆಯಾಗಿದ್ದು, ಈ ಮೂಲಕ ಜನತೆಯಲ್ಲಿ ಮತ್ತೆ ಆತಂಕವನ್ನು ಹೆಚ್ಚಳ ಮಾಡಿದೆ.

Edited By : Nagaraj Tulugeri
PublicNext

PublicNext

01/01/2022 11:02 pm

Cinque Terre

94.74 K

Cinque Terre

11

ಸಂಬಂಧಿತ ಸುದ್ದಿ