ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾ ತೀವ್ರತೆ ತಡೆಗಟ್ಟಲು ಕಠಿಣ ಕ್ರಮ ಅಗತ್ಯ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾಗೂ ಒಮಿಕ್ರಾನ್ ಸೋಂಕಿನ ತೀವ್ರತೆ ಹೆಚ್ಚುತ್ತಿದೆ. ಹೀಗಾಗಿ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವ ಅಗತ್ಯ ಇದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಇದಕ್ಕೂ ಮುನ್ನ ಸಂಕ್ರಾಂತಿ ನಂತರ ನಿಯಮ ಸಡಿಲಿಕೆ ಬಗ್ಗೆ ಮಾತನಾಡಿದ್ದ ಸಿಎಂ, ಇಂದು ಮಾಧ್ಯಮಗಳೊಂದಿಗೆ ಮಾತನಾಡಿ, ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿವೆ. ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ತಿಳಿಸಿದ್ದಾರೆ. ಕೋವಿಡ್ ಯಾವ ರೀತಿ ಬೆಳವಣಿಗೆ ಆಗುತ್ತೆ ಅದರ ಅಧಾರದ ಮೇಲೆ ಕ್ರಮ ತೀರ್ಮಾನ ಮಾಡುತ್ತೇನೆ. ಭಾನುವಾರ ರಾಜ್ಯದಲ್ಲಿ 12 ಸಾವಿರ ಕೇಸ್ ದಾಖಲಾಗಿದೆ ಮತ್ತು ಬೆಂಗಳೂರಲ್ಲಿ 9 ಸಾವಿರ ಕೇಸ್ ವರದಿಯಾಗಿದೆ. ಪಾಸಿಟಿವಿಟಿ ರೇಟ್ ಶೇ 6.8ರಷ್ಟು ಆಗಿದೆ. ಬೆಂಗಳೂರಲ್ಲಿ ಶೇ.10ರಷ್ಟಿದೆ. ಇಡೀ ಭಾರತದ ದೇಶದಲ್ಲಿ ಈಗ ನಮ್ಮ ರಾಜ್ಯ 3ನೇ ಸ್ಥಾನದಲ್ಲಿದೆ. ಹೀಗಾಗಿ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನ ತಗೆದುಕೊಳ್ಳುವ ಅವಶ್ಯಕತೆ ಇದೆ ಎಂದಿದ್ದಾರೆ.

Edited By : Nagaraj Tulugeri
PublicNext

PublicNext

10/01/2022 04:42 pm

Cinque Terre

46.79 K

Cinque Terre

5

ಸಂಬಂಧಿತ ಸುದ್ದಿ