ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಾರಾಂತ್ಯದ ಕರ್ಫ್ಯೂಗೆ ಸ್ವಪಕ್ಷೀಯರಿಂದಲೇ ವಿರೋಧ: ಸಿಎಂ ತೀರ್ಮಾನ ಏನು?

ಬೆಂಗಳೂರು ಕೊರೊನಾ 3ನೇ ಅಲೆಯನ್ನು ಕಟ್ಟಿ ಹಾಕಲು ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಆದರೂ ಅದರ ತೀವ್ರತೆ ಕಡಿಮೆ ಆಗದಿರುವ ಹಿನ್ನೆಲೆ ಸರ್ಕಾರ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ.

ಆದ್ರೆ ಸರ್ಕಾರದ ಈ ನಿರ್ಧಾರಕ್ಕೆ ಬಿಜೆಪಿ ನಾಯಕರೇ ಅಸಮಾಧಾನ ಹೊರಹಾಕಿದ್ದಾರೆ. ಇದು ಜನಸಾಮಾನ್ಯರಿಗೆ ಹೊರೆಯಾಗಲಿದೆ ಎಂದಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೊರೊನಾ ತಡೆಗೆ ಇಂಥ ನಿರ್ಬಂಧಗಳು ಪರಿಹಾರವಲ್ಲ. ಸೋಂಕು ಹರಡುವುದನ್ನು ತಡೆಯಲು ಲಾಕ್​ಡೌನ್ ಅಥವಾ ವೀಕೆಂಡ್ ಕರ್ಫ್ಯೂ ಪರಿಹಾರವಲ್ಲ.ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರ ನಿರ್ಧಾರ ಬದಲಿಸಬೇಕು ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಸದ್ಯಕ್ಕೆ ವಾರಾಂತ್ಯದ ಕರ್ಫ್ಯೂ ಅಗತ್ಯವಿಲ್ಲ. ರಾಜ್ಯದ ಆರ್ಥಿಕತೆಯೂ ಕೂಡಾ ಸಾಗಬೇಕು. ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಹಾಗಾಗಿ ಸರ್ಕಾರ ನೋಡಿಕೊಂಡು ವೀಕೆಂಡ್ ಕರ್ಫ್ಯೂ ಕುರಿತು ತೀರ್ಮಾನ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿರೋ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ರಾಜ್ಯ ಸರ್ಕಾರಕ್ಕೆ ಹಲವು ಸಲಹೆಗಳನ್ನು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಲಾಕ್‌ಡೌನ್ ಕಠಿಣ ನಿಯಮಗಳನ್ನು ಸರ್ಕಾರ ಮಾಡಬೇಡಿ ಎಂದು ಒತ್ತಾಯಿಸಿದ್ದಾರೆ. ಸ್ವಪಕ್ಷೀಯರಿಂದಲೇ ವಿರೋಧ ಕೇಳಿ ಬಂದ ಹಿನ್ನೆಲೆ ಇನ್ಮುಂದೆ ಸಿಎಂ ಬೊಮ್ಮಾಯಿ ನಿರ್ಧಾರ ಏನಾಗಲಿದೆ? ಎಂಬುದು ಕುತೂಲ ಮೂಡಿಸಿದೆ.

Edited By : Nagaraj Tulugeri
PublicNext

PublicNext

19/01/2022 08:08 am

Cinque Terre

48.54 K

Cinque Terre

1

ಸಂಬಂಧಿತ ಸುದ್ದಿ