ನವದೆಹಲಿ: ಕೊರೊನಾ ಮೊದಲ ಅಲೆ ಹಾಗೂ ಎರಡನೇ ಅಲೆ ಸಂದರ್ಭಗಳಲ್ಲಿ ಸೋಂಕು ತಗುಲಿ ಮೃತಪಟ್ಟ ವೈದ್ಯಕೀಯ ಸಿಬ್ಬಂದಿಗೆ ಪರಿಹಾರ ದೊರೆತಿಲ್ಲ. ಹೀಗಾಗಿ 'ಆಪ್ ಸರ್ಕಾರ'ದ ವಿರುದ್ಧ ಆಕ್ರೋಶಿತರಾದ ವೈದ್ಯರು ದೆಹಲಿಯ ಎಲ್ಲ ಆಸ್ಪತ್ರೆಗಳಲ್ಲಿ ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾಗಿದ್ದಾರೆ.
ಕೋವಿಡ್ ಕಾರಣದಿಂದ ಮೃತಪಟ್ಟ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯ ಕುಟುಂಬಸ್ಥರಿಗೆ ಒಂದು ಕೋಟಿ ರೂ. ಪರಿಹಾರ ನೀಡೋದಾಗಿ ದೆಹಲಿ ಸರ್ಕಾರ ಹೇಳಿತ್ತು. ಆದರೆ ಇದುವರೆಗೂ ಮೃತಪಟ್ಟ ವೈದ್ಯಕೀಯ ಸಿಬ್ಬಂದಿಯ ಯಾವುದೇ ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ. ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಎಂಬುದು ಸಾಂಕೇತಿಕ ಪ್ರತಿಭಟನೆ ನಡೆಸಿದ ವೈದ್ಯರು ಹಾಗೂ ಸಿಬ್ಬಂದಿ ಒತ್ತಾಯಿಸಿದ್ದಾರೆ.
ಜನವರಿ 24 ಹಾಗೂ 25ರಂದು ವೈದ್ಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಿದ್ದಾರೆ.
PublicNext
24/01/2022 06:04 pm