ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶದಲ್ಲಿ ಕೊರೊನಾ ಮತ್ತೆ ಉಲ್ಬಣ: ಬುಧವಾರ ಪ್ರಧಾನಿ ನೇತೃತ್ವದಲ್ಲಿ ಸಭೆ

ನವದೆಹಲಿ: ದೇಶಾದ್ಯಂತ ಕೊರೊನಾ ಪಾಸಿಟಿವಿಟಿ ಹೆಚ್ಚಾಗುತ್ತಿದೆ. ಮತ್ತೆ ಕೊರೊನಾ ಸೋಂಕು ಜನತೆಯನ್ನು ಭೀಕರವಾಗಿ ಕಾಡುವ ಲಕ್ಷಣಗಳು ಕಾಣುತ್ತಿವೆ. ಈ ಹಿನ್ನೆಲೆಯಲ್ಲಿ ಬರುವ ಬುಧವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಲಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಈ ಸಭೆಯಲ್ಲಿ ದೇಶದ ಕೊರೋನಾ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ.

ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,527 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆ 4,30,54,952 ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 15,079 ಕ್ಕೆ ಏರಿಕೆಯಾಗಿದೆ. ಇನ್ನೂ 33 ಜನರ ಸಾವಿನೊಂದಿಗೆ ದೇಶದಲ್ಲಿ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದವರ ಸಂಖ್ಯೆ 5,22,149ಕ್ಕೆ ಏರಿದೆ.

Edited By : Nagaraj Tulugeri
PublicNext

PublicNext

24/04/2022 07:25 am

Cinque Terre

66.8 K

Cinque Terre

1

ಸಂಬಂಧಿತ ಸುದ್ದಿ