ಬೆಂಗಳೂರು: ಕರ್ನಾಟಕದಲ್ಲಿ ಪಲ್ಸ್ ಪೋಲಿಯೋ ಮಾದರಿಯಲ್ಲಿ ಕಾಲುಬಾಯಿ ರೋಗಕ್ಕೆ ವ್ಯವಸ್ಥಿತ ಲಸಿಕಾ ಅಭಿಯಾನ ನಡೆಸಲಾಗುವುದು ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ 78 ತಾಲೂಕುಗಳ 419 ಹಳ್ಳಿಗಳಲ್ಲಿ ಕಾಲುಬಾಯಿ ರೋಗ 4,475 ಜಾನುವಾರುಗಳಲ್ಲಿ ಕಂಡುಬಂದಿರುತ್ತದೆ. ಉಳಿದ ಜಾನುವಾರುಗಳು ಚಿಕಿತ್ಸೆಯಿಂದ ಗುಣಮುಖ ಆಗಿರುತ್ತವೆ. ಪಶುಸಂಗೋಪನೆ ಇಲಾಖೆಯ ವೈದ್ಯಾಧಿಕಾರಿಗಳು ನಿರಂತರವಾಗಿ ರೋಗ ಕಂಡುಬಂದ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ತೀವ್ರವಾಗಿ ನಿಗಾ ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ 57 ಹಸುಗಳು ಇಲ್ಲಿಯವರೆಗೆ ಮೃತಪಟ್ಟಿದ್ದು, 4066 ಜಾನುವಾರುಗಳು ಚಿಕಿತ್ಸೆಯಿಂದ ಗುಣಮುಖವಾಗಿವೆ ಎಂದು ಹೇಳಿದ್ದಾರೆ.
PublicNext
23/09/2021 10:15 pm