ಬೆಂಗಳೂರು : ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲ ಪಶು ಆಸ್ಪತ್ರೆಗಳಲ್ಲಿ ಇಂದಿನಿಂದ 3 ದಿನ ಉಚಿತವಾಗಿ ನಾಯಿಗಳಿಗೆ ಲಸಿಕೆ ನೀಡಲಾಗುವುದು ಎಂದು ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜಾಗತಿಕವಾಗಿ ರೇಬೀಸ್ ರೋಗದ ನಿರ್ಮೂಲನೆಗಾಗಿ ಜಾಗೃತಿ ಮೂಡಿಸಲು, ಪ್ರತಿ ವರ್ಷ ಸೆಪ್ಟಂಬರ್ 28 ರಂದು ವಿಶ್ವ ರೇಬೀಸ್ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕರಿಗೆ ರೇಬೀಸ್ ರೋಗದ ಕುರಿತು ಅರಿವು ಮೂಡಿಸುವ ಹಾಗೂ ಉಚಿತ ಲಸಿಕೆ ಹಾಕುವ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ ರಾಜ್ಯಾದ್ಯಂತ 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
PublicNext
28/09/2021 11:58 am