ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಸಚಿವ ಉಮೇಶ್ ಕತ್ತಿ ಇನ್ನಿಲ್ಲ

ಬೆಂಗಳೂರು : ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಶಾಸಕ, ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಅವರಿಗೆ ಮಂಗಳವಾರ ರಾತ್ರಿ 10. 30ಕ್ಕೆ ನಗರದ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಎದೆನೋವು ಕಾಣಿಸಿಕೊಂಡಿದೆ.

ಈ ವೇಳೆ ತಕ್ಷಣವೇ ಕುಟುಂಬಸ್ಥರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿತ್ತಾದರೂ ಸಚಿವರು ಬದುಕುಳಿಯಲಿಲ್ಲ.ಸಚಿವ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಎರಡು ಬಾರಿ ಉಮೇಶ್ ಕತ್ತಿ ಅವರಿಗೆ ಹಾರ್ಟ್ ಆಟ್ಯಾಕ್ ಆಗಿತ್ತು. ಈ ಹಿಂದೆ ಹೃದಯಾಘಾತವಾದಾಗ ಅವರ ಹಾರ್ಟ್‌ಗೆ ಸ್ಟಂಟ್ ಅಳವಡಿಸಲಾಗಿತ್ತು. ಇದೀಗ ಮೂರನೇ ಬಾರಿಗೆ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದೆ.

ಆಂಧ್ರಪ್ರದೇಶ, ತೆಲಂಗಾಣದಂತೆ ನಮ್ಮ ರಾಜ್ಯದಲ್ಲೂ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿ ಎಂಬ ಬಗ್ಗೆ ಉಮೇಶ್​ ಕತ್ತಿ ಕನಸು ಕಂಡಿದ್ದರು. ನಾನು ಸಿಎಂ ಆಗುವುದಾದರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ. ನನ್ನ ಹಣೆಬರಹದಲ್ಲಿ ಬರೆದಿದ್ದರೆ ನಾನು ಸಿಎಂ ಆಗುತ್ತೇನೆ. ಇರುವ 224 ಶಾಸಕರಲ್ಲಿ ನಾನೇ ಹಿರಿಯ ಶಾಸಕ. ನನಗೆ ಸಿಎಂ ಆಗುವ ಎಲ್ಲಾ ಅರ್ಹತೆ ಇದೆ ಎಂದು ತಾವು ಸಿಎಂ ಆಗುವ ಆಸೆಯನ್ನೂ ಹೊರ ಹಾಕಿದ್ದರು.

ಸಿಎಂ ಸ್ಥಾನಕ್ಕಾಗಿ ನಾನು ಪ್ರತ್ಯೇಕ ರಾಜ್ಯ ಕೇಳುತ್ತಿಲ್ಲ. ನನಗೆ ಅಖಂಡ ಕರ್ನಾಟಕದ ಸಿಎಂ ಆಗಬೇಕೆಂಬ ಬಯಕೆ ಇದೆ. ಪ್ರತ್ಯೇಕ ರಾಜ್ಯವಾದರೂ ಕೂಡಾ ನಾವು ಕನ್ನಡಿಗರೇ. ಆಂಧ್ರ ಪ್ರದೇಶ, ತೆಲಂಗಾಣ ರೀತಿಯಲ್ಲೇ ನಮ್ಮ ರಾಜ್ಯದಲ್ಲೂ ಪ್ರತ್ಯೇಕ ರಾಜ್ಯವಾಗಲಿ ಎಂದು ಬಯಸಿದ್ದೇನೆ. ನಮ್ಮ ಜನರ ದೃಷ್ಟಿಯಿಂದ ನಾನೇ ಹಿರಿಯನಾಗಿ ಧ್ವನಿ ಎತ್ತಿದ್ದೇನೆ ಎಂದು ಉಮೇಶ್ ಕತ್ತಿ ಹೇಳಿದ್ದರು.

Edited By : Nirmala Aralikatti
PublicNext

PublicNext

06/09/2022 11:49 pm

Cinque Terre

84.07 K

Cinque Terre

52

ಸಂಬಂಧಿತ ಸುದ್ದಿ