ನವದೆಹಲಿ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಆರೋಗ್ಯ ಗಂಭೀರವಾಗಿದ್ದು, ಶನಿವಾರ ತುರ್ತು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಸಚಿವರ ಆರೋಗ್ಯದ ಬಗ್ಗೆ ಅವರ ಪುತ್ರ, ಲೋಕ್ ಜನಶಕ್ತಿ ಪಾರ್ಟಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಇಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. 'ಕಳೆದ ಕೆಲವು ದಿನಗಳಿಂದಲೂ ತಂದೆಯವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ಸಂಜೆ ಒಮ್ಮೆಲೇ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾದ ಕಾರಣ, ತಡರಾತ್ರಿ ತುರ್ತಾಗಿ ಹೃದಯ ಶಸ್ತ್ರಚಿಕಿತ್ಸೆ ಮಾಡಬೇಕಾಯಿತು. ಇನ್ನು ಕೆಲವು ವಾರದ ಬಳಿಕ ಅಗತ್ಯ ಬಿದ್ದರೆ ಇನ್ನೊಂದು ಶಸ್ತ್ರಚಿಕಿತ್ಸೆ ಮಾಡಬೇಕಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಸಚಿವರ ಅನಾರೋಗ್ಯ ನಿಮಿತ್ತ ಬಿಹಾರ ಚುನಾವಣೆಗೆ ಸಂಬಂಧಪಟ್ಟಂತೆ ಲೋಕ್ ಜನಶಕ್ತಿ ಪಾರ್ಟಿ ಹಮ್ಮಿಕೊಂಡಿದ್ದ ಸಭೆಯನ್ನೂ ಮುಂದೂಡಲಾಗಿದೆ.
PublicNext
04/10/2020 03:52 pm