ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ದೆಹಲಿ ಅಷ್ಟೇ ಅಲ್ಲ ದೇಶದಾದ್ಯಂತ ಕೋವಿಡ್ ಲಸಿಕೆ ಫ್ರೀ'

ನವದೆಹಲಿ: ದೆಹಲಿ ಅಷ್ಟೇ ಅಲ್ಲದೆ ದೇಶದಾದ್ಯಂತ ಉಚಿತವಾಗಿ ಕೋವಿಡ್–19 ಲಸಿಕೆಯನ್ನು ವಿತರಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ಲಸಿಕೆ ನೀಡುವ ಪ್ರಕ್ರಿಯೆಯ ಅಣಕು ಕಾರ್ಯಾಚರಣೆಗೆ ಸಿದ್ಧತೆ ಪರಿಶೀಲಿಸಿದರು. ಬಳಿಕ ಮಾಧ್ಯಮಗಳು, ಕೋವಿಡ್‌–19 ಲಸಿಕೆಯನ್ನು ಉಚಿತವಾಗಿ ವಿತರಿಸಲಾಗುತ್ತದೆಯೇ ಎಂದು ಪ್ರಶ್ನೆಗೆ ಉತ್ತರಿಸಿದ ಅವರು, 'ದೆಹಲಿಯಲ್ಲಿ ಮಾತ್ರವಲ್ಲ. ಲಸಿಕೆ ಇಡೀ ದೇಶದಲ್ಲಿ ಉಚಿತವಾಗಿ ವಿತರಿಸಲಾಗುವುದು’ ಎಂದು ಅವರು ಹೇಳಿದ್ದಾರೆ.

ಅಷ್ಟೇ ಅಲ್ಲದೆ ಟ್ವೀಟ್ ಮಾಡಿರುವ ಅವರು, ಕೋವಿಡ್-19 ವ್ಯಾಕ್ಸಿನೇಷನ್‌ನ 1ನೇ ಹಂತದಲ್ಲಿ 1 ಕೋಟಿ ವೈದ್ಯಕೀಯ ಸಿಬ್ಬಂದಿ ಮತ್ತು 2 ಕೋಟಿ ಮುಂಚೂಣಿ ಕಾರ್ಮಿಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ದೇಶಾದ್ಯಂತ ಉಚಿತವಾಗಿ ಲಸಿಕೆ ವಿತರಿಸಲಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Edited By : Vijay Kumar
PublicNext

PublicNext

02/01/2021 02:47 pm

Cinque Terre

101.07 K

Cinque Terre

2

ಸಂಬಂಧಿತ ಸುದ್ದಿ