ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾ ಲಸಿಕೆ ವಿತರಣೆಗೆ ರಾಜ್ಯ ಸಿದ್ಧ: ಸಚಿವ ಸುಧಾಕರ್

ಬೆಂಗಳೂರು: ಕೊರೊನಾ ಲಸಿಕೆ ವಿತರಣೆಗೆ ರಾಜ್ಯ ಸಿದ್ಧವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.

ಯಲಹಂಕ ಸಾರ್ವಜನಿಕ ಆಸ್ಪತ್ರೆಯ ಮಾದರಿ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು ಲಸಿಕೆ ವಿತರಣೆಯ ಅಣಕು ಕಾರ್ಯವನ್ನು ಪರಿಶೀಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಸಿಕೆ ಹಾಕುವ ಅಣಕು ಕಾರ್ಯದಿಂದ ಸಿಬ್ಬಂದಿಗೆ ತರಬೇತಿ ದೊರೆತಿದೆ. ಜನವರಿಯಲ್ಲೇ ಲಸಿಕೆ ದೊರೆಯುವ ನಿರೀಕ್ಷೆ ಇದ್ದು, ಲಸಿಕೆ ಸಿಕ್ಕ ಬಳಿಕ ವಿತರಿಸಲು ಈ ಅಣಕು ಕಾರ್ಯ ನೆರವಾಗಲಿದೆ. ರಾಜ್ಯದಲ್ಲಿ ಐದು ಕಡೆ ಲಸಿಕೆ ನೀಡುವ ಅಣಕು ಪ್ರಯೋಗ ನಡೆಯುತ್ತಿದೆ ಎಂದು ತಿಳಿಸಿದರು.

ಯೋಧರಿಗೆ ಮೊದಲ ಹಂತದಲ್ಲಿ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು. ಈ ಸಂಬಂಧ ಕೇಂದ್ರ ಸರ್ಕಾರವು ಮಾರ್ಗ ಸೂಚಿಯನ್ನು ನೀಡಲಿದೆ. ಅದರಂತೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.

Edited By : Vijay Kumar
PublicNext

PublicNext

02/01/2021 11:09 pm

Cinque Terre

74.31 K

Cinque Terre

2

ಸಂಬಂಧಿತ ಸುದ್ದಿ