ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಗಾಳದಲ್ಲಿ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ: ಬ್ಯಾನರ್ಜಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಎಲ್ಲ ಜನರಿಗೂ ಉಚಿತವಾಗಿ ಕೋವಿಡ್-19 ಲಸಿಕೆ ಲಭ್ಯವಾಗುವಂತೆ ರಾಜ್ಯ ಸರ್ಕಾರ ಸಿದ್ಧತೆ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಹೇಳಿದ್ದಾರೆ.

ಸಂಪೂರ್ಣ ಉಚಿತವಾಗಿ ರಾಜ್ಯದಲ್ಲಿನ ಜನಸಾಮಾನ್ಯರಿಗೆ ಕೋವಿಡ್- 19 ಲಸಿಕೆ ನೀಡಲು ರಾಜ್ಯ ಸರ್ಕಾರ ಎಲ್ಲಾ ಸಿದ್ಧತೆ ಮಾಡುತ್ತಿರುವುದನ್ನು ಸಂತೋಷದಿಂದ ತಿಳಿಸುತ್ತಿರುವುದಾಗಿ ಬ್ಯಾನರ್ಜಿ ನುಡಿದಿದ್ದಾರೆ.

ಕೇರಳ, ತಮಿಳುನಾಡು, ಮಧ್ಯ ಪ್ರದೇಶ ಸೇರಿದಂತೆ ಹಲವು ರಾಜ್ಯಗಳು, ತಮ್ಮ ಜನರಿಗೆ ಉಚಿತವಾಗಿ ಕೋವಿಡ್-19 ಲಸಿಕೆ ನೀಡುವುದಾಗಿ ತಿಳಿಸಿವೆ. ಜನವರಿ 16 ರಿಂದ ದೇಶದಲ್ಲಿ ಕೋವಿಡ್-19 ಲಸಿಕೆ ಆರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Edited By : Nagaraj Tulugeri
PublicNext

PublicNext

10/01/2021 04:55 pm

Cinque Terre

69.6 K

Cinque Terre

4

ಸಂಬಂಧಿತ ಸುದ್ದಿ