ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಡುಗಡೆಗೂ ಮುನ್ನ ಶಶಿಕಲಾ ಅಸ್ವಸ್ಥ ಆಸ್ಪತ್ರೆಗೆ ದಾಖಲು

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಅಸ್ವಸ್ಥಗೊಂಡಿದ್ದು, ಜೈಲಿನಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜನವರಿ 27, 2021ರಂದು ಶಶಿಕಲಾ ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ನಡುವೆ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಶಶಿಕಲಾ ಅವರನ್ನು ಜೈಲಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಅಗತ್ಯ ಬಿದ್ದರೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ಒದಗಿಸಲಾಗುವುದು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

20/01/2021 05:26 pm

Cinque Terre

74.63 K

Cinque Terre

4