ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಚಿನ್ನಮ್ಮ, ಜ್ವರ ಮತ್ತು ಬೆನ್ನು ಉರಿ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಕೊರೊನಾ ಪರೀಕ್ಷೆ ನಡೆಸಿದಾಗ ರಿಪೋರ್ಟ್ ನೆಗೆಟಿವ್ ಬಂದಿದೆ. ಬೇರೆ ಸಮಸ್ಯೆಗಳಿಗೆ ಚಿಕಿತ್ಸೆ ನೀಡಿದ ವೈದ್ಯರು ಎಂಆರ್ಐ ಸ್ಕ್ಯಾನಿಂಗ್ ಸಲುವಾಗಿ ಗುರುವಾರ ಮಧ್ಯಾಹ್ನ ವಿಕ್ಟೋರಿಯಾ ಆಸ್ಪತ್ರೆಗೆ ಶಶಿಕಲಾರನ್ನು ಸ್ಥಳಾಂತರ ಮಾಡಿದ್ದಾರೆ. ಈ ವೇಳೆ ಆರ್ಟಿಪಿಸಿಆರ್ ಪರೀಕ್ಷೆಯಲ್ಲಿ ಸೋಂಕು ದೃಢವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹೀಗಾಗಿ ಅವರ ಬಿಡುಗಡೆ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
PublicNext
21/01/2021 10:58 pm