ರಾಷ್ಟ್ರೀಯ ಜನತಾದಳ (ಆರ್ಜೆಡಿ) ಅಧ್ಯಕ್ಷ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಅವರ ಆರೋಗ್ಯದಲ್ಲಿ ತೀವ್ರ ಏರಿಳಿತ ಉಂಟಾದ ಹಿನ್ನೆಲೆಯಲ್ಲಿ ಸ್ಥಿತಿ ಹದಗೆಟ್ಟಿದೆ. ಅವರನ್ನು ರಾಂಚಿಯ ಆರ್ ಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
72 ವರ್ಷದ ಲಾಲು ಪ್ರಸಾದ್ ಅವರು ಹಲವು ವರ್ಷಗಳಿಂದ ಅನೇಕ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಲಾಲು ಅವರ ಪತ್ನಿ ರಾಬ್ಡಿ ದೇವಿ ಮತ್ತು ಕಿರಿಯ ಮಗ ತೇಜಸ್ವಿ ಯಾದವ್ ಮಗಳು ಮಿಸಾ ಭಾರ್ತಿ ರಿಮ್ಸ್ ಆಸ್ಪತ್ರೆಗೆ ಬಂದಿದ್ದಾರೆ.
ಲಾಲೂ ಪ್ರಸಾದ್ ಅವರು ಈಗಾಗಲೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಮತ್ತು ಅವರ ಮೂತ್ರಪಿಂಡ ಶೇಕಡಾ 25 ರಷ್ಟು ಮಾತ್ರ ಕಾರ್ಯನಿರ್ವಹಿಸುತ್ತಿದೆ. ಅಷ್ಟೇ ಅಲ್ಲದೆ ನ್ಯುಮೋನಿಯಾ ಕೂಡ ಇದೆ ಹಾಗಾಗಿ ಉಸಿರಾಡುವಾಗ ಅವರು ತೊಂದರೆ ಎದುರಿಸುತ್ತಿದ್ದಾರೆ.
PublicNext
23/01/2021 11:29 am