ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುಜರಾತ್ ಸಿಎಂ ವಿಜಯ್ ರೂಪಾನಿಗೆ ಕೊರೊನಾ ದೃಢ

ಗಾಂಧಿನಗರ: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಅವರನ್ನು ಐಸೋಲೇಷನ್‌ನಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

ವಿಜಯ್ ರೂಪಾನಿ ಅವರು ವಡೋದರಾದ ನಿಜಾಮಪುರನಲ್ಲಿ ಮಹಾನಗರ ಪಾಲಿಕೆ ಚುನಾವಣೆಯ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ವೇದಿಕೆ ಮೇಲೆ ಮತದಾರರನ್ನು ಉದ್ದೇಶಿಸಿ ಮಾತನಾಡುವಾಗ ದಿಢೀರ್ ಕುಸಿದು ಬಿದ್ದಿದ್ದರು. ಚುನಾವಣೆ ಹಿನ್ನೆಲೆ ನಿರಂತರ ಪ್ರಚಾರದಲ್ಲಿ ತೊಡಗಿಕೊಂಡಿರುವ ಸಿಎಂ ಕಳೆದ ಎರಡು ದಿನಗಳಿಂದ ಸರಿಯಾಗಿ ವಿಶ್ರಾಂತಿ ಸಹ ಪಡೆದುಕೊಂಡಿರಲಿಲ್ಲ. ಈ ಹಿನ್ನೆಲೆ ಕಡಿಮೆ ರಕ್ತದೊತ್ತಡದಿಂದಾಗಿ ಕುಸಿದಿದ್ದಾರೆ ಎಂದು ವರದಿಯಾಗಿದೆ.

ನಿರಂತರವಾಗಿ ಜನರ ಸಂಪರ್ಕದಲ್ಲಿದ್ದರಿಂದ ಕೊರೊನಾ ಸೋಂಕು ತಗುಲಿರುವ ಸಾಧ್ಯತೆಗಳಿವೆ. ಮಹಾನಗರ ಪಾಲಿಕೆ ಚುನಾವಣೆಯ ಪ್ರಚಾರದಲ್ಲಿ ಕಳೆದ ಮೂರು ದಿನಗಳಿಂದ ಭಾಗಿಯಾಗಿದ್ದರು. ಸದ್ಯ ಆಸ್ಪತ್ರೆಯಲ್ಲಿ ಒಂದು ವಾರ ಇರಲಿದ್ದಾರೆ ಎಂದು ಡಿಸಿಎಂ ನಿತಿನ್ ಪಟೇಲ್ ಮಾಹಿತಿ ನೀಡಿದ್ದಾರೆ.

Edited By : Vijay Kumar
PublicNext

PublicNext

15/02/2021 08:52 pm

Cinque Terre

112.27 K

Cinque Terre

2