ಹೊಸದಿಲ್ಲಿ: ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಅವರಿಗೆ ಉಸಿರಾಟದ ಸಮಸ್ಯೆ ಕಂಡ ಹಿನ್ನಲೆಯಲ್ಲಿ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೋಪಾಲ್ ಸಂಸದೆಯಾಗಿರುವ ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ಏಮ್ಸ್ ಗೆ ದಾಖಲಿಸಲಾಗಿದೆ ಎಂದು ಸಂಸದರ ಕಚೇರಿ ಅಧಿಕೃತ ಮಾಹಿತಿ ನೀಡಿದೆ.
ಕಳೆದ ಡಿಸೆಂಬರ್ ನಲ್ಲಿ ಪ್ರಗ್ಯಾ ಸಿಂಗ್ ಠಾಕೂರ್ ಕೋವಿಡ್ ಕಾರಣದಿಂದ ಏಮ್ಸ್ ಗೆ ದಾಖಲಾಗಿದ್ದರು. ಇದಾದ ಎರಡು ತಿಂಗಳ ನಂತರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
PublicNext
20/02/2021 09:54 am