ಬೆಂಗಳೂರು- ಕೊರೊನಾ 2ನೇ ಅಲೆ ಕೇರಳದಲ್ಲಿ ಆವರಿಸಿದೆ. ಈ ಹಿನ್ನೆಲೆಯಲ್ಲಿ ಕೇರಳದಿಂದ ಕರ್ನಾಟಕಕ್ಕೆ ಬರುವ ಜನರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ.
ಈ ನಡುವೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದು ಕೇರಳ- ಕರ್ನಾಟಕ ಗಡಿಯಲ್ಲಿ ಪ್ರವೇಶಕ್ಕೆ ತೊಂದರೆಯಾಗುತ್ತಿದೆ. ಈ ಭಾಗದಲ್ಲಿ ಹೆಚ್ಚಾಗಿ ವಿದ್ಯಾರ್ಥಿಗಳು, ನೌಕರರು, ಹಾಗೂ ರೋಗಿಗಳು ಪ್ರಯಾಣಿಸುತ್ತ ಇರುತ್ತಾರೆ. ಅಲ್ಲಿ ಸಂಚಾರ ನಿರ್ಬಂಧ ವಿಧಿಸಿದ್ದರಿಂದ ಗಡಿ ಭಾಗದ ಕೇರಳ ಜನರಿಗೆ ತೊಂದರೆಯಾಗುತ್ತಿದೆ ಎಂದು ಉಲ್ಲೇಖಿಸಿದ್ದಾರೆ.
ಇದಕ್ಕೆ ಇದೇ ಫೆಬ್ರವರಿ 16ರಂದು ಸುತ್ತೋಲೆ ಹೊರಡಿಸಿರುವ ಕರ್ನಾಟಕ ಸರ್ಕಾರ, ಕೇರಳ ಗಡಿಯಲ್ಲಿ ಬರುವವರಿಗೆ ಯಾವುದೇ ನಿರ್ಬಂಧ ಹೇರಿಲ್ಲ. ಆರ್ ಟಿ ಪಿ ಸಿ ಆರ್ ನೆಗೆಟಿವ್ ವರದಿ ತರುವುದು ಕಡ್ಡಾಯ ಎಂದು ಉಲ್ಲೇಖಿಸಿದೆ. ಈ ಸುತ್ತೋಲೆಯ ಪ್ರತಿಯನ್ನು ಹಾಗೂ ಕೇರಳ ಸರ್ಕಾರ ಬರೆದ ಪತ್ರದ ಪ್ರತಿಯನ್ನೂ ಹಾಕಿ ಟ್ವೀಟ್ ಮಾಡಿರುವ ಸಚಿವ ಸುಧಾಕರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
PublicNext
23/02/2021 06:38 pm