ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಇಂದು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ.
ದೇಶಾದ್ಯಂತ ಇಂದು ಎರಡನೇ ಹಂತದ ಕೊರೊನಾ ವ್ಯಾಕ್ಸಿನೇಷನ್ ಆರಂಭವಾಗಿದೆ. ಇಂದಿನಿಂದ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಆರೋಗ್ಯ ಸಮಸ್ಯೆಯುಳ್ಳ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮೊದಲ ಡೋಸ್ ಲಸಿಕೆ ಹಾಕಿಸಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ''ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ -19 ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದೇನೆ. ಕೋವಿಡ್-19 ವಿರುದ್ಧದ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ತ್ವರಿತ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗಿದೆ. ಲಸಿಕೆ ತೆಗೆದುಕೊಳ್ಳುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ಎಂದು ಕೇಳಿಕೊಂಡಿದ್ದಾರೆ.
PublicNext
01/03/2021 08:00 am