ನವ ದೆಹಲಿ : ಕೇಂದ್ರದ ಸರ್ಕಾರದ ಮಾಜಿ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ಜುಲೈ ಅಂತ್ಯದೊಳಗೆ ದೇಶದ ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಕೋವಿಡ್ ಲಸಿಕೆಗಳನ್ನು ಪೂರೈಸಲಾಗುತ್ತದೆ ಎಂದು ಭರವಸೆಯನ್ನು ನೀಡಿದ್ದರು.
ಕೇಂದ್ರ ಸರ್ಕಾರ ಭರವಸೆ ಈಡೇರದ ಹಿನ್ನೆಲೆಯಲ್ಲಿ ಹಾಗೂ ದೇಶದಾದ್ಯಂತಯ ಕೋವಿಡ್ ಲಸಿಕೆಗಳ ಕೊರತೆ ಇರುವ ಹಿನ್ನೆಲೆಯಲ್ಲಿ ಕೇಂದ್ರದ ವಿರುದ್ಧ ವಿರುದ್ಧ ರಾಹುಲ್ ಟ್ವೀಟಾಸ್ತ್ರ ಪ್ರಯೋಗಿಸಿದ್ದಾರೆ. ಮೂರನೇ ಅಲೆಯ ಭೀತಿಯಿಂದ ದೇಶದಲ್ಲಿ ಮತ್ತೆ ಕೋವಿಡ್ ಲಸಿಕೆಯ ಹಾಹಾಕಾರ ಎದ್ದಿದೆ.
ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದವರು ಈಗ ಎರಡನೇ ಡೋಸ್ ಪಡೆಯುವುದಕ್ಕೆ ಅರ್ಹತೆಯನ್ನು ಪಡೆದಿದ್ದಾರೆ, ಇನ್ನೂ ಕೂಡ ಕೆಲವು ರಾಜ್ಯಗಳಲ್ಲಿ ಕೋವಿಡ್ ಲಸಿಕೆಯ ಕೊರತೆ ನೀಗಿಲ್ಲ ಎಂದು, ಬೇಕಾದಷ್ಟು ಲಸಿಕೆಗಳು ರಾಜ್ಯಗಳಿಗೆ ಪೂರೈಕೆಯಾಗುತ್ತಿಲ್ಲ.
ಈ ಹಿನ್ನೆಲೆಯಲ್ಲಿ ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್, ಜುಲೈ ಮುಗಿದು ಹೋಗಿದೆ, ಇನ್ನೂ ಲಸಿಕೆ ಕೊರತೆ ನೀಗಿಲ್ಲ ಎಂದು ಲಸಿಕೆಯ ಕೊರತೆಯ ವಿಸ್ತೃತ ವರದಿಯ ವೀಡಿಯೊ ತುಣುಕೊಂದನ್ನು ಪೋಸ್ಟ್ ಮಾಡಿದ್ದಾರೆ.
PublicNext
01/08/2021 11:43 am