ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ ; ಆಸ್ಪತ್ರೆಗೆ ಸಿಎಂ ಯೋಗಿ ಭೇಟಿ

ಲಖನೌ (ಉತ್ತರಪ್ರದೇಶ): ಬಿಜೆಪಿ ಹಿರಿಯ ನಾಯಕ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅನಾರೋಗ್ಯದಿಂದ ಲಕ್ನೋದಲ್ಲಿರುವ ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಹಲವು ದಿನಗಳಿಂದಲೂ ಕಲ್ಯಾಣ್ ಸಿಂಗ್ ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದರು. ಸದ್ಯ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಆಸ್ಪತ್ರೆಗೆ ತೆರಳಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ವಿಚಾರಿಸಿದ್ದಾರೆ. 89 ವರ್ಷದ ಕಲ್ಯಾಣ್ ಸಿಂಗ್ ಅವರು ಬಿಜೆಪಿಯ ಹಿರಿಯ ನಾಯಕರಾಗಿದ್ದು, ರಾಜಸ್ಥಾನದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

Edited By : Nirmala Aralikatti
PublicNext

PublicNext

20/08/2021 04:54 pm

Cinque Terre

54.52 K

Cinque Terre

1

ಸಂಬಂಧಿತ ಸುದ್ದಿ