ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟರಿಗೆ ಹಾಗೂ ಬಡವರಿಗೆ ಉಚಿತವಾಗಿ ಅಂಗಾಂಗ ಕಸಿ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಕರ್ನಾಟಕ ಇತರ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಂಡಾವಿಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಕ್ಟೋರಿಯಾ ಆವರಣದಲ್ಲಿನ ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋ ಎಂಟ್ರಾಲಜಿ ಸೈನ್ಸ್ ಆ್ಯಂಡ್ ಆಗ್ರ್ಯಾನ್ ಟ್ರಾನ್ಸ್‌ಪ್ಲಾಂಟ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರಧಾನ ಮಂತ್ರಿಗಳ ಯೋಜನೆ ಕರ್ನಾಟಕದಲ್ಲಿ ಸದ್ಬಳಕೆಯಾಗುತ್ತಿದೆ. ಆರೋಗ್ಯ ಸ್ವಾಸ್ಥ್ಯ, ಅಂತ್ಯೋದಯ ಯೋಜನೆ ಮೂಲಕ ಬಡವರಿಗಾಗಿ ಕೆಲಸ ಮಾಡುತ್ತಿದೆ’ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳು ರಾಜ್ಯಕ್ಕೆ ಹೆಲ್ತ್ ವಿಷನ್ ಸಿದ್ಧಪಡಿಸಿ ಆರೋಗ್ಯ ಸೇವೆ ಹಾಗೂ ಆರೋಗ್ಯ ಸೌಕರ್ಯದ ಅಭಿವೃದ್ಧಿಗೆ ದೀರ್ಘಕಾಲಿಕ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ. ಬಡವರ ಆರೋಗ್ಯದ ಹಿತರಕ್ಷಣೆಯಿಂದ ಅಂತ್ಯೋದಯ ಆಧಾರದಲ್ಲಿ ಆಯುಷ್ಮಾನ್ ಭಾರತ ಯೋಜನೆ ಜಾರಿಯಾಗಿದೆ ಎಂದು ಮನ್ಸುಖ್ ಮಂಡಾವಿಯ ತಿಳಿಸಿದರು.
PublicNext
11/10/2021 03:45 pm