ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಇಂದು ಸಂಜೆ ದಾಖಲಿಸಲಾಗಿದೆ.

ಮನಮೋಹನ್ ಸಿಂಗ್ ಅವರಿಗೆ ನಿನ್ನೆ ಜ್ವರ ಕಾಣಿಸಿಕೊಂಡಿತ್ತು. ಆದರೆ ಇಂದು ಸಂಜೆ ಜ್ವರ ಹೆಚ್ಚಾಗಿದ್ದು, ನಿಶಕ್ತಿ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಯ ಏಮ್ಸ್ ಆಸ್ಪತ್ರೆಯ ಡಾ. ನಿತೀಶ್ ನಾಯಕ್ ನೇತೃತ್ವದಲ್ಲಿ ಮನಮೋಹನ್ ಸಿಂಗ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಕಳೆದ ಮೇ ತಿಂಗಳಲ್ಲೂ ಮನಮೋಹನ್ ಸಿಂಗ್ ಅವರಿಗೆ ಎದೆನೋವು ಹಾಗೂ ಜ್ವರದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೊರೊನಾ ಸೋಂಕು ಪರೀಕ್ಷೆಯನ್ನೂ ನಡೆಸಲಾಗಿತ್ತು. ಕೊರೊನಾ ಪರೀಕ್ಷೆಯಲ್ಲಿ ವರದಿ ನೆಗೆಟಿವ್ ಬಂದಿತ್ತು. ಚಿಕಿತ್ಸೆಯಿಂದ ಚೇತರಿಕೆ ಕಂಡಿದ್ದ ಮನಮೋಹನ್ ಸಿಂಗ್ ಅವರನ್ನು ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.

Edited By : Vijay Kumar
PublicNext

PublicNext

13/10/2021 07:24 pm

Cinque Terre

204.94 K

Cinque Terre

31

ಸಂಬಂಧಿತ ಸುದ್ದಿ