ನವದೆಹಲಿ: ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಇರುವುದಾಗಿ ಏಮ್ಸ್(ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದಿದ್ದಾರೆ. 89 ವರ್ಷದ ಸಿಂಗ್ ಅವರಿಗೆ ಜ್ವರ ಮತ್ತು ಆಯಾಸ ಕಾಣಿಸಿಕೊಂಡಿದ್ದರಿಂದ ಏಮ್ಸ್ ಗೆ ದಾಖಲಿಸಲಾಗಿತ್ತು.
ಏಮ್ಸ್ ಆಸ್ಪತ್ರೆಯ ಕಾರ್ಡಿಯೋ-ನ್ಯೂರೋ ಸೆಂಟರ್ ನ ಖಾಸಗಿ ವಾರ್ಡ್ನಲ್ಲಿರುವ ಸಿಂಗ್ ಅವರ ಆರೋಗ್ಯದ ಮೇಲೆ ಡಾ.ನಿತೀಶ್ ನಾಯಕ್ ನೇತೃತ್ವದ ಹೃದ್ರೋಗ ತಜ್ಞರ ತಂಡ ನಿಗಾವಹಿಸಿದೆ.
PublicNext
16/10/2021 06:03 pm