ದೊಡ್ಡಬಳ್ಳಾಪುರ: ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಕೋಲಾರದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
98 ವರ್ಷದ ಜಾಲಪ್ಪ ಅವರಿಗೆ ವಯೋಸಹಜ ಕಾಯಿಲೆಯಿದ್ದು, ಶ್ವಾಸಕೋಶ ಮತ್ತು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಕ್ಷೀಣಿಸಿದ್ದರಿಂದ ಕೋಲಾರದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಡಯಾಲಿಸಿಸ್ ಮಾಡಿದ ನಂತರ ಅವರ ಆರೋಗ್ಯ ಚೇತರಿಕೆ ಕಂಡಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
PublicNext
10/12/2021 07:52 pm