ದಾವಣಗೆರೆ: ಅಸ್ವಸ್ಥಗೊಂಡ ವಿದ್ಯಾರ್ಥಿನಿಯನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸೇರಿಸುವ ಮೂಲಕ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮಾನವೀಯತೆ ಮೆರೆದಿದ್ದಾರೆ.
ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಹನಾ ಎಂಬ ವಿದ್ಯಾರ್ಥಿನಿ ನಡೆಸಿಕೊಟ್ಟಿದ್ದರು. ಆದರೆ ಈ ವೇಳೆ ಸಹನಾ ಅಸ್ವಸ್ಥಗೊಂಡು ನಿತ್ರಾಣ ಆದರು.
ಕೂಡಲೇ ತಮ್ಮ ವಾಹನದಲ್ಲೇ ಹೊನ್ನಾಳಿಯ ಸರ್ಕಾರಿ ಆಸ್ಪತ್ರೆಗೆ ರೇಣುಕಾಚಾರ್ಯ ಕರೆತಂದರು. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಿದ ರೇಣುಕಾಚಾರ್ಯ ಅವರು ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡಿ ನಿಗಾ ವಹಿಸುವಂತೆ ಸೂಚನೆ ನೀಡಿದರು.
PublicNext
20/03/2022 09:57 am